Follow us:-
ಕ್ರಿಯೇಟಿವ್ ಕಾಲೇಜಿನಲ್ಲಿ  ಮನಃಶಾಂತಿಗೆ  ಯೋಗ ಕಾರ್ಯಕ್ರಮ
  • By Lishan Gowda
  • June 21, 2025
  • No Comments

ಕ್ರಿಯೇಟಿವ್ ಕಾಲೇಜಿನಲ್ಲಿ ಮನಃಶಾಂತಿಗೆ ಯೋಗ ಕಾರ್ಯಕ್ರಮ

ಯೋಗ ದಿನಾಚರಣೆಯ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 21 ಜೂನ್ 2025 ರಂದು ಮನಃಶಾಂತಿಗೆ ಯೋಗ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ 2 ಗಿನ್ನಿಸ್ ದಾಖಲೆ ಸೃಷ್ಟಿಸಿ, 9 ವಿಶ್ವದಾಖಲೆ ನಿರ್ಮಿಸಿದ ಅದ್ಭುತ ಪ್ರತಿಭೆ ಉಡುಪಿಯ ಸೈಂಟ್ ಸಿಸಿಲಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ತನುಶ್ರೀರವರು ‘ತನು ಯೋಗ ಭೂಮಿ’ ಮುಖಾಂತರ ಯೋಗ ಪ್ರದರ್ಶನವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ ಯೋಗವು ಕೇವಲ ವ್ಯಾಯಾಮವಲ್ಲ. ಅದು ಬದುಕುವ ಒಂದು ಶೈಲಿ. ನಾವು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಮತ್ತು ಸಂತುಷ್ಟ ಜೀವನವನ್ನು ಬದುಕಬಹುದು ಎನ್ನುತ್ತಾ ಯೋಗದ ಮಹತ್ವವನ್ನು ಕುರಿತು ತಿಳಿಸಿದರು.
ಕಾರ್ಯಕ್ರಮದ ಕೊನೆಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ತನುಶ್ರೀಯವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *