ಹೆಚ್.ಕೆ.ಎಸ್ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತು ಕಾರ್ಯಕ್ರಮ
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಡುಪಿಯ ಶ್ರೀ ಮದ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕರು ಮತ್ತು ಪ್ರಧಾನ ತರಬೇತಿದಾರರಾದ ಡಾ. ಸಿ ಕೆ ಮಂಜುನಾಥ್ ಅವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಿದ್ಧತೆ, ವೇಳಾಪಟ್ಟಿಯೊಂದಿಗೆ ಎಲ್ಲಾ ವಿಷಯಗಳನ್ನು ಸಮನಾಗಿ ಅಭ್ಯಾಸ ಮಾಡುವ ವಿಧಾನ, ಮಿತವಾದ ಆಹಾರ ಸೇವನೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸ್ಥೈರ್ಯ, ವಿದ್ಯಾರ್ಥಿಗಳ ಯಶಸ್ಸಿನ ದಾರಿಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕರಾದ ರಮೇಶ್ ಎಂ ಅವರು ಅಭ್ಯಾಗತರನ್ನು ಸ್ವಾಗತಿಸಿದರು, ಆಂಗ್ಲ ಭಾಷೆಯ ಉಪನ್ಯಾಸಕರಾದ ಶ್ರೀನಿವಾಸ್ ಜೆ ಎನ್ ಅವರು ನಿರೂಪಿಸಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.