ಹೆಚ್.ಕೆ.ಎಸ್ ಪಿ ಯು ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ಇಗ್ನಿಶಿಯಾ-2025 ಕಾರ್ಯಕ್ರಮ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ಕಾಮರ್ಸ್ ಫೆಸ್ಟ್(ಇಗ್ನಿಶಿಯಾ-2025) ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅತ್ಯಂತ ಅಭೂತ ಪೂರ್ವವಾಗಿ ಈ ಕಾರ್ಯಕ್ರಮದಲ್ಲಿ ಮತ್ತು ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ಅವರ ಪರಿಶ್ರಮ ಶ್ಲಾಘನೀಯ, ವಾಣಿಜ್ಯ ಶಾಸ್ತ್ರ ವಿದ್ಯಾರ್ಥಿಗಳಿಗೆ ಅಂಕಗಳನ್ನು ಪಡೆಯಲು ಸಹಾಯಕವಾಗುವುದರ ಸೃಜನಶೀಲತೆಯನ್ನು ಸೃಜಿಸುತ್ತದೆ ಎಂದು ಅಭಿಪ್ರಾಯಪಟ್ಟರು”. ಸಂಸ್ಥೆಯ ಪ್ರಾಂಶುಪಾಲರಾದ ಪ್ರವೀಣ್ ಎ ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಾಯೋಗಿಕ ಶಿಕ್ಷಣ ಸಹಕಾರಿಯಾಗಿದೆ ಎಂದು ತಿಳಿಸಿದರು. ಉಪ ಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಅಶ್ವಿನಿ ಸಿ ಎಲ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಲ್ಲಿರುವ ವಿವಿಧ ಕೌಶಲ ಪ್ರತಿಭೆಯ ಅನಾವರಣದ ಸಲುವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮವನ್ನು ಅರ್ಥಶಾಸ್ತ್ರ ಉಪನ್ಯಾಸಕರಾದ ಮಹೇಶ್ ಕೆ ಎನ್ ಅವರು ನಿರೂಪಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕರಾದ ಕೃಷ್ಣ ಪ್ರಕಾಶ್ ಪಿ ಪಿ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು