NIFT 2025ರ ಪರೀಕ್ಷೆಯಲ್ಲಿ ಹೆಚ್ ಕೆ ಎಸ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸುವ ರಾಷ್ಟ್ರಮಟ್ಟದ NIFT ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳಾದ ಚರಣ್ ಜಿ ಎಂ, ಚಿನ್ಮಯಿ ಆರ್, ಹರ್ಷ ಎಸ್ ಗೌಡ, ಜೀವಿತ ಜಿ ಆರ್, ಮಾನಸಿ ಪಿ, ನವ್ಯ ಕೆ ಆರ್, ಪೂರ್ವಿಕ್ ಕೆ ಸಿ, ಪ್ರಾಪ್ತಿ ಎಂ ಗೌಡ, ರಕ್ಷಾ, ಸುಖಿ ಆರ್ ಗೌಡ, ವಿಕಾಸ್ ಡಿ ಸಿ ಮುಂದಿನ ಹಂತಕ್ಕೆ ಆಯ್ಕೆಯಾಗಿ ಅದ್ಭುತ ಸಾಧನೆಗೈದಿದ್ದಾರೆ.
ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ರಕ್ಷಿತ್ ಬಿ ಎಸ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.