ಎನ್ ಡಿ ಎ ಲಿಖಿತ ಪರೀಕ್ಷೆಯಲ್ಲಿ ಹೆಚ್. ಕೆ. ಎಸ್ ಕಾಲೇಜಿನ 5 ವಿದ್ಯಾರ್ಥಿಗಳು ಆಯ್ಕೆ
ಕೇಂದ್ರ ಲೋಕಸೇವಾ ಆಯೋಗ ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹುದ್ದೆಗೆ ಏಪ್ರಿಲ್ 13 ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಈ ಅದ್ಭುತ ಸಾಧನೆಗೈದಿದ್ದಾರೆ.
ಎನ್. ಡಿ. ಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಅವರು ನಡೆಸಿದ ಲಿಖಿತ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತ್ರಿಶ್ಲಾ ಗಾಂಧಿ, ತನಿಷಾ, ಚೇತನ್ ಗೌಡ ಎನ್ ಎಸ್, ಮೋನಿಷಾ ಡಿ ಹಾಗೂ ಸಂಗೀತ ಬಿ ಎಂ ಅವರು ತೇರ್ಗಡೆ ಹೊಂದಿ ಸರ್ವಿಸ್ ಸೆಲೆಕ್ಷನ್ ಬೋರ್ಡ್ ಅವರು ನಡೆಸುವ ಸಂದರ್ಶನಕ್ಕೆ ಹಾಸನ ಜಿಲ್ಲೆಯಿಂದ ಆಯ್ಕೆಗೊಂಡು ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ , ಪ್ರಾಂಶುಪಾಲರು, ಸಂಯೋಜಕರಾದ ರಕ್ಷಿತ್ ಬಿ. ಎಸ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.