ಹೆಚ್ .ಕೆ .ಎಸ್ ಕಾಲೇಜಿನಲ್ಲಿ ಓರಿಯಂಟೇಷನ್ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾಸನ ಇಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಜೆ ಇ ಇ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ ಎಲ್ ಅವರು ನಮ್ಮ ಸಂಸ್ಥೆ ಶಿಕ್ಷಣದ ಜೊತೆಗೆ ಶಿಸ್ತು ಸಂಯಮ ಸಂಸ್ಕೃತಿಯನ್ನು ಕಲಿಸುತ್ತದೆ. ಮಕ್ಕಳು ತಮ್ಮ ಭವಿಷ್ಯದ ಬಾಗಿಲನ್ನು ತೆರೆಯಬೇಕಾದರೆ ಆತ್ಮಸ್ಥೈರ್ಯ ಮುಖ್ಯ. ಪಿಯುಸಿ ಹಂತದ ಜೆ ಇ ಇ, ಸಿಇಟಿ, ನೀಟ್ ನಂತಹ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕುರಿತು ಮಾಹಿತಿ ನೀಡಿದರು. ಉಪ ಪ್ರಾಂಶುಪಾಲರಾದ ಆದಿತ್ಯವಟಿ ಕೆ ಅವರು ಪದವಿ ಪೂರ್ವ ಶಿಕ್ಷಣದ ಎರಡು ವರ್ಷದ ಶೈಕ್ಷಣಿಕ ಪಠ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಪ್ರವೀಣ್ ಎ ಅವರು ಕಾಲೇಜಿನ ಶಿಸ್ತು ಮತ್ತು ನಿಯಮ, ಶೈಕ್ಷಣಿಕ ವರ್ಷದ ರೂಪುರೇಷೆಗಳ ಕುರಿತು ಮಾತನಾಡಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಸಂಸ್ಥೆಯ ಸರ್ವತೋಮುಖ ಬೆಳವಣಿಗೆ ಹಾಗೂ ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಜೆ ಇ ಇ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ನೆರವೇರಿಸಲಾಯಿತು.
ಸಭಾ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ರಮೇಶ್ ಎಂ ನಿರೂಪಿಸಿದರು. ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ಸ್ವಾಗತಿಸಿದರೆ ಸಂಸ್ಕೃತ ಉಪನ್ಯಾಸಕರಾದ ಗಣೇಶ ಕೃಷ್ಣಾನಂದ ಭಟ್ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.