ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಪ್ರವೇಶ ಪರೀಕ್ಷೆಯ ಮಾಹಿತಿ ಕಾರ್ಯಗಾರ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ನ್ಯಾಷನಲ್ ಆಪ್ಟಿಟ್ಯುಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪ್ರವೇಶ ಪರೀಕ್ಷೆಯ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಡಿಸೈನ್ ವೆನ್ಯೂ ಸಂಸ್ಥೆಯ ಸ್ಥಾಪಕರಾದ ಆರ್ಕಿಟೆಕ್ಟ್ ಶ್ರೀ ಚಂದ್ರಶೇಖರ್ ಅವರು ಆರ್ಕಿಟೆಕ್ಚರ್ ಪ್ರವೇಶ ಪರೀಕ್ಷೆಯ ಕುರಿತು ಆನ್ಲೈನ್ ಮುಖಾಂತರ ಸಂಪೂರ್ಣ ಮಾಹಿತಿ ನೀಡಿ ಆರ್ಕಿಟೆಕ್ಚರ್ ನಲ್ಲಿ ಮುಂದಿರುವ ಅವಕಾಶಗಳ ಬಗ್ಗೆ ತಿಳಿಸಿಕೊಟ್ಟರು. ಸಂಯೋಜಕರಾದ ರಕ್ಷಿತ್ ಬಿ ಎಸ್ ಅವರು ಕಾರ್ಯಕ್ರಮದ ಕುರಿತು ಮಾತನಾಡಿ, ವಿದ್ಯಾರ್ಥಿಗಳಿಗೆ ನಾಟ ಪ್ರವೇಶ ಪರೀಕ್ಷೆಯ ಸಂಪೂರ್ಣ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರವೀಣ್ ಎ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.