Follow us:-
ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ  ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಸಿ ಎ ಮತ್ತು ಸಿ ಎಸ್ ಓರಿಯಂಟೇಶನ್ ಕಾರ್ಯಕ್ರಮ.
  • By CREATIVE ADMIN
  • July 3, 2025
  • No Comments

ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಸಿ ಎ ಮತ್ತು ಸಿ ಎಸ್ ಓರಿಯಂಟೇಶನ್ ಕಾರ್ಯಕ್ರಮ.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಸಿ ಎ ಮತ್ತು ಸಿ ಎಸ್ ಇ ಇ ಟಿ ಪರೀಕ್ಷೆಗಳ ಕುರಿತು ಓರಿಯೆಂಟೇಶನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಗಣನಾಥ್ ಶೆಟ್ಟಿ ಬಿ ಅವರು ವಿದ್ಯಾರ್ಥಿಗಳು NCERT ಪಠ್ಯಕ್ರಮದ ಜೊತೆಗೆ CA ಮತ್ತು CSEET ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ಭವಿಷ್ಯವನ್ನು ರೂಪಿಸಿಕೊಂಡು ಅವಕಾಶ ಕಾಯುವುದಕ್ಕಿಂತ ಅವಕಾಶವನ್ನು ಸೃಷ್ಟಿಸಿಕೊಳ್ಳಬೇಕೆಂದು ಮೌಲ್ಯಯುತ ಮಾತುಗಳನ್ನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪತಿ ರಾಜವರ್ಧನ್ ಅಂಡ್ ಕೋ ಕಂಪನಿಯ ಪಾರ್ಟ್ನರ್ ಸಿ ಎ ರಾಜವರ್ಧನ್ ಎ ಅವರು ಪದವಿ ಪೂರ್ವ ಶಿಕ್ಷಣದ ನಂತರ ವಾಣಿಜ್ಯ ವಿಭಾಗದಲ್ಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ವಿವಿಧ ಅವಕಾಶಗಳನ್ನು ತಿಳಿಸುತ್ತಾ ಪ್ರಸ್ತುತ ದಿನಗಳಲ್ಲಿ ಸಿ ಎ ಮತ್ತು ಸಿ ಎಸ್ ಹುದ್ದೆಗಳಿಗೆ ಇರುವ ಬೇಡಿಕೆಯ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ವಿದ್ಯಾರ್ಥಿಗಳು ನಿರ್ದಿಷ್ಟವಾದ ಗುರಿಯನ್ನು ಹೊಂದಿ ಭವಿಷ್ಯವನ್ನು ರೂಪಿಸಿಕೊಳ್ಳಲು ಹಿತನುಡಿಗಳನ್ನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವ್ಯವಹಾರ ಅಧ್ಯಯನ ಉಪನ್ಯಾಸಕರಾದ ಕೃಷ್ಣಪ್ರಕಾಶ್ ಪಿ ಪಿ ಅವರು ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರಾದ ಸುಧಾಮ ಉಡುಪ ಸ್ವಾಗತಿಸಿದರೆ, ಗಣಕ ವಿಜ್ಞಾನ ಉಪನ್ಯಾಸಕರಾದ ಮಹೇಶ್ ಕುಮಾರ್ ಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *