Follow us:-
ಹೆಚ್ ಕೆ ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ
  • By CREATIVE ADMIN
  • August 23, 2025
  • No Comments

ಹೆಚ್ ಕೆ ಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ

ನಗರದ ಪ್ರತಿಷ್ಠಿತ ಸಂಸ್ಥೆಯಾದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜು, ಹಾಸನ ಇಲ್ಲಿ ಆಗಸ್ಟ್ 23 ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಬಾಹ್ಯಾಕಾಶ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಎ ಎಸ್ ಕಿರಣ್ ಕುಮಾರ್ ಅವರು ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿ, ಪ್ರಪಂಚದ ಹಲವಾರು ವಿಜ್ಞಾನಿಗಳ ವಿವಿಧ ಸಂಶೋಧನೆ, ಅನ್ವೇಷಣೆ, ಆವಿಷ್ಕಾರಗಳನ್ನು ತಿಳಿಸುತ್ತಾ ಬಾಹ್ಯಾಕಾಶದಲ್ಲಿರುವ ಉಪಗ್ರಹಗಳಿಂದಾಗುತ್ತಿರುವ ಉಪಯೋಗಗಳು, ಭಾರತ ದೇಶ ಬಾಹ್ಯಾಕಾಶ ತಂತ್ರಜ್ಞಾನವನ್ನು ನಿರ್ಮಾಣ ಮಾಡಿ ಸಮಾಜಕ್ಕೆ ಉಪಯೋಗವಾಗುವ ಕೆಲಸ ಮಾಡುತ್ತಿದೆ, ಸ್ವಾತಂತ್ರ್ಯೋತರ ಭಾರತ ಆರ್ಥಿಕ ಪ್ರಗತಿಯಲ್ಲಿ ಪ್ರಪಂಚದಲ್ಲಿಯೇ ನಾಲ್ಕನೇ ದೇಶವಾಗಿ ಅಭಿವೃದ್ಧಿ ಹೊಂದಿರುವ ದೇಶ, ಮಂಗಳಯಾನಕ್ಕೆ ಉಪಗ್ರಹ ಉಡಾವಣೆ ಮಾಡಿದಾಗ ಮೊಟ್ಟ ಮೊದಲಿಗೆ ಯಶಸ್ವಿಯಾದ ದೇಶ ಭಾರತ ದೇಶ, ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಇಳಿದಾಗ ಇಡೀ ಪ್ರಪಂಚವೇ ಭಾರತದ ಕಡೆಗೆ ನೋಡಿತು ಎಂದು ಪ್ರಶಂಸಿಸುತ್ತ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹೆಚ್ ಕೆ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹೆಚ್ ಎಸ್ ಪ್ರಶಾಂತ್ ಗೌಡ ಅವರು ಎ ಎಸ್ ಕಿರಣ್ ಕುಮಾರ್ ಅವರ ಕಾರ್ಯವೈಖರಿಯನ್ನು ಪ್ರಶಂಸಿಸುತ್ತ ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಹಾಗೂ ಉಪ ಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ರಮೇಶ್. ಎಂ. ನಿರೂಪಿಸಿದರೆ, ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕರಾದ ಗಣೇಶ ಕೆ ಭಟ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *