ಹೆಚ್ ಕೆ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಯುವ ಸಂಸತ್ತು ಕಾರ್ಯಕ್ರಮ
ಹಾಸನದ ಪ್ರತಿಷ್ಠಿತ ಸಂಸ್ಥೆಯಾದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜು, ಹಾಸನ ಇಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಪ್ರಜಾಪ್ರಭುತ್ವದ ಮೌಲ್ಯಗಳು ನಾಗರೀಕ ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲಪಡಿಸುವಲ್ಲಿ ಯುವಕರ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸಂವಾದಾತ್ಮಕ ಯುವ ಸಂಸತ್ತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಹಾಸನದ ಸಂತ ಜೋಸೆಫರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮ್ಯಾಕ್ಸಿಮ್ ಡಯಾಸ್ ಎಸ್ ಜೆ ಅವರು ಸಂವಿಧಾನದ ರಚನೆ, ಜಗತ್ತಿನ ಬೃಹತ್ ಸಂವಿಧಾನ ಭಾರತ ಸಂವಿಧಾನ, ಭಾರತದ ಸಂವಿಧಾನ ಬಲಿಷ್ಠವಾದದ್ದು, ಭಾರತದಲ್ಲಿ ಸರ್ವಾಧಿಕಾರ ನಡೆಯುವುದಿಲ್ಲ ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಹೊಂದಿದೆ ಎಂದು ಹೇಳುತ್ತಾ ಪ್ರಜಾಪ್ರಭುತ್ವದ ಅರ್ಥ ಮತ್ತು ತತ್ವಗಳು, ಸಾಂವಿಧಾನಿಕ ಮೌಲ್ಯಗಳು ಮತ್ತು ಮೂಲಭೂತ ಹಕ್ಕುಗಳ ಪ್ರಾಮುಖ್ಯತೆ, ಪ್ರಜಾಪ್ರಭುತ್ವ ಸಮಾಜವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರ ಪಾತ್ರ, ಪ್ರಜಾಪ್ರಭುತ್ವಕ್ಕೆ ಪ್ರಸ್ತುತ ಸವಾಲುಗಳು ಮತ್ತು ಸಕ್ರಿಯ ಪೌರತ್ವದ ಅಗತ್ಯ ಎಂಬ ಹಲವು ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು. ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.