ಹೆಚ್ ಕೆ ಎಸ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಭೇಟಿಯ ಕುರಿತು ವರದಿ ಸಲ್ಲಿಕೆ ಕಾರ್ಯಕ್ರಮ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜು, ಹಾಸನ ಇಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಕೈಗೊಂಡ ಕೈಗಾರಿಕಾ ಅಧ್ಯಯನ ಭೇಟಿಯ ವರದಿ ಸಲ್ಲಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಕ್ರಿಯಾಶೀಲತೆ ಹಾಗೂ ಜ್ಞಾನದಿಂದ ವಿಭಿನ್ನವಾಗಿ ವಿನ್ಯಾಸಗೊಳಿಸಿದ ವರದಿಗಳನ್ನು ಪ್ರಸ್ತುತಪಡಿಸಿದರು. ಕೈಗಾರಿಕ ಅಧ್ಯಯನ ಭೇಟಿಯ ವರದಿಯನ್ನು ಸ್ವೀಕರಿಸಿದ ಪ್ರಾಂಶುಪಾಲರು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಶ್ಲಾಘಿಸಿ, ವಾಣಿಜ್ಯ ಶಾಸ್ತ್ರ ವಿಭಾಗವು ಹಮ್ಮಿಕೊಳ್ಳುವ ಮಹತ್ವಪೂರ್ಣ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಜೀವಶಾಸ್ತ್ರ ಉಪನ್ಯಾಸಕಿ ಮೋಮಿನ ಮೆಹರ್ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಕೃಷ್ಣಪ್ರಕಾಶ್, ಶ್ರೀ ಸುಧಾಮ ಉಡುಪ ಉಪಸ್ಥಿತರಿದ್ದರು.