ಹೆಚ್ ಕೆ ಎಸ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪೋಷಕ ಸಭೆ ಕಾರ್ಯಕ್ರಮ.
ದಿನಾಂಕ:28-09-2025 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಂಗಳೂರಿನ ವಿಸ್ಡಮ್ ಶಿಕ್ಷಣ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗುರುತೇಜ್ ಅವರು ಎರಡು ವರ್ಷದ ಪಿಯುಸಿ ಯು ಜೀವನದ ಪ್ರಮುಖ ಘಟ್ಟ, ಪಿಯುಸಿ ಶಿಕ್ಷಣವು ಮಕ್ಕಳ ಜೀವನವನ್ನು ಸೃಷ್ಟಿಸುತ್ತದೆ. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ಎಲ್ಲಾ ಮಾಹಿತಿಗಳು ಲಭ್ಯವಿದೆ. ವಿದ್ಯಾರ್ಥಿಗಳು ಯಶಸ್ಸಿನ ಕಡೆಗೆ ಮನಸ್ಸಿರಬೇಕೆಂದು ತಿಳಿಸಿದರು. ವಿಸ್ಡಂ ಶಿಕ್ಷಣ ಸಂಸ್ಥೆಯ ಸಹಸಂಸ್ಥಾಪಕರಾದ ಫ್ರಾನ್ಸಿಸ್ ಕ ತೇಜ್ ಅವರು ಮಕ್ಕಳ ಶಿಕ್ಷಣದ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ, ಎಲ್ಲಾ ಮಕ್ಕಳನ್ನು ಸಮಾನತೆಯಿಂದ ಕಾಣುವವರು ಶಿಕ್ಷಕರು, ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಚಿರಋಣಿಯಾಗಿರಬೇಕು ಹಾಗೂ ಎಲ್ಲಾ ವಿಷಯಗಳನ್ನು ಕಲಿಯುವುದರಿಂದ ಇರುವ ಪ್ರಯೋಜನದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಶಿಕ್ಷಣದ ಜೊತೆಗೆ ಆಹಾರದ ಗುಣಮಟ್ಟದ ಬಗ್ಗೆ ತಿಳಿಸುತ್ತಾ ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು. ಜೀವಶಾಸ್ತ್ರ ಉಪನ್ಯಾಸಕರಾದ ರಂಜಿತ್ ಶೆಟ್ಟಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆ. ಇ. ಇ, ಕೆ.ಸಿ.ಇ.ಟಿ, ಎನ್.ಡಿ. ಎ, ಸಿ ಎ ಫೌಂಡೇಶನ್ ನಂತಹ ಪರೀಕ್ಷೆಗಳಿಗೆ ನಮ್ಮ ಸಂಸ್ಥೆ ಉತ್ತಮವಾದ ತರಬೇತಿ ನೀಡಲಾಗುತ್ತಿದೆ ಎನ್ನುತ್ತಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಹಾಕುವ ವಿಧಾನವನ್ನು ಹಂತ ಹಂತವಾಗಿ ತಿಳಿಸಿದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಕಾರ್ಯಕ್ರಮದ ರೂಪುರೇಷೆಗಳನ್ನು ಕುರಿತು ಮಾತನಾಡುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮವನ್ನು ಆಂಗ್ಲ ಉಪನ್ಯಾಸಕರಾದ ಚಿಂತನ್ ಬಿ ಆರ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ರಮೇಶ್ ಎಂ ಅವರು ನಿರೂಪಿಸಿದರೆ, ಆಂಗ್ಲ ಉಪನ್ಯಾಸಕರಾದ ಶ್ರೀನಿವಾಸ್ ಜೆ ಎನ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.