Follow us:-
ಹೆಚ್ ಕೆ ಎಸ್ ಕಾಲೇಜಿನಲ್ಲಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
  • By CREATIVE ADMIN
  • December 4, 2025
  • No Comments

ಹೆಚ್ ಕೆ ಎಸ್ ಕಾಲೇಜಿನಲ್ಲಿ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

ದಿನಾಂಕ:04-12-2025 ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ, ಹಾಸನ ಉಪ ನಿರ್ದೇಶಕರ ಕಛೇರಿ, ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜು, ಹಾಸನ ಹಾಗೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ 2025 – 26ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವು ಹಾಸನದ ಹೆಚ್‌ ಕೆ ಎಸ್ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಹೆಚ್ ಕೆ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಹೆಚ್ ಎಸ್ ಪ್ರಶಾಂತ್ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಶ್ರೀ ಗಂಗಾಧರ ಕೆ ಪಿ ಉಪನಿರ್ದೇಶಕರು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಹಾಸನ ಜಿಲ್ಲೆ, ಹಾಸನ ಇವರು ಕ್ರೀಡಾ ಜ್ಯೋತಿಯನ್ನು ಸ್ವೀಕಾರ ಮಾಡಿದರು.
ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯಗಳನ್ನು ತಿಳಿಸುತ್ತಾ ನೈಜ ಕ್ರೀಡಾ ಸ್ಪೂರ್ತಿಯನ್ನು ಉಳಿಸಿಕೊಳ್ಳುವಂತೆ ಮನವಿ ಮಾಡುತ್ತಾ ಆಟಗಾರರು ಶಿಸ್ತು, ದೃಢಸಂಕಲ್ಪ ಮತ್ತು ಗೌರವದೊಂದಿಗೆ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕು ಎಂದು ಪ್ರೇರೇಪಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಾಸನ ಜಿಲ್ಲೆಯ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಗಂಗಾಧರ ಕೆ ಪಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕ್ರೀಡೆಯಲ್ಲಿ ಸೋಲು ಗೆಲುವು ಸರ್ವೇಸಾಮಾನ್ಯ, ಇವತ್ತಿನ ಕಲುಷಿತ ವಾತಾವರಣದಲ್ಲಿ ಕ್ರೀಡೆಯಿಂದ ಉತ್ತಮ ಆರೋಗ್ಯ ವೃದ್ಧಿಸುತ್ತದೆ ಎಂದು ಎಲ್ಲಾ ಕ್ರೀಡಾಪಟುಗಳಿಗೆ ಹಿತನುಡಿಗಳನ್ನಾಡಿದರು. ಹೆಚ್ ಕೆ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಹೆಚ್ ಎಸ್ ಪ್ರಶಾಂತ್ ಗೌಡ ಅವರು ಪ್ರತಿಯೊಬ್ಬ ವಿದ್ಯಾರ್ಥಿಗೆ ಶಿಕ್ಷಣದ ಜೊತೆಗೆ ಕ್ರೀಡೆಯು ಸರ್ವತೋಮುಖ ಬೆಳವಣಿಗೆಯನ್ನು ವೃದ್ಧಿಸುತ್ತದೆ ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡುತ್ತಾ ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ, ಹಾಸನ ಜಿಲ್ಲೆಯ ಪ್ರಾಂಶುಪಾಲ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲಾ ಪ್ರಾಂಶುಪಾಲರುಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಪ್ರವೀಣ್ ಎ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ರಮೇಶ್ ಎಂ ನಿರೂಪಿಸಿದರೆ, ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *