Follow us:-
ಹೆಚ್.ಕೆ. ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವೈಭವದ ಕ್ರಿಯೇಟಿವ್ ಆವಿರ್ಭವ್-2025 ವಾರ್ಷಿಕೋತ್ಸವ  ಕಾರ್ಯಕ್ರಮ ಆಚರಣೆ
  • By CREATIVE ADMIN
  • December 13, 2025
  • No Comments

ಹೆಚ್.ಕೆ. ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವೈಭವದ ಕ್ರಿಯೇಟಿವ್ ಆವಿರ್ಭವ್-2025 ವಾರ್ಷಿಕೋತ್ಸವ ಕಾರ್ಯಕ್ರಮ ಆಚರಣೆ

ದಿನಾಂಕ: 13/12/2025 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜು, ಇಲ್ಲಿ ವಾರ್ಷಿಕೋತ್ಸವ ಕ್ರಿಯೇಟಿವ್ ಆವಿರ್ಭವ್-2025 ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ ಎಲ್ ಅವರು ಕ್ರಿಯೇಟಿವ್ ಆವಿರ್ಭವ ಎನ್ನುವುದು ಕಲೆ, ಸಾಹಿತ್ಯದ ಸಂವಹನದ ಅದ್ಭುತ ಕ್ಷಣ, ಶಿಕ್ಷಣ ಎನ್ನುವುದು ಕೇವಲ ಪಠ್ಯಕ್ರಮವಲ್ಲ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಲಿಯುವಂತದ್ದು, ಭಾರತೀಯ ಸೈನಿಕರ ತ್ಯಾಗ, ಬಲಿದಾನ, ಹೋರಾಟವನ್ನು ನೆನಪಿನಲ್ಲಿಟ್ಟುಕೊಳ್ಳುವ ಸಲುವಾಗಿ ಸಿಂದೂರ ಸಂಭ್ರಮ ಪರಿಕಲ್ಪನೆಯನ್ನು ಸಡಗರದಿಂದ ಆಚರಿಸುತ್ತಿದ್ದೇವೆ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ ಕಾರ್ಗಿಲ್ ಯುದ್ಧದ ಯೋಧರು ಮತ್ತು ಸೇನಾ ಪದಕ ಪ್ರಶಸ್ತಿ ಪುರಸ್ಕೃತರಾದ ಕ್ಯಾಪ್ಟನ್ ನವೀನ್ ನಾಗಪ್ಪ ಎ ಎನ್ ಅವರು ತಾನು ಬೆಳೆದು ಬಂದ ಬಗೆ, ಭಾರತೀಯ ಸೇನೆಗೆ ಸೇರಿದ ಸಂಗತಿ, 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧದ ಬಗ್ಗೆ ತಿಳಿಸುತ್ತಾ ನಮ್ಮ ಬದುಕಿನಲ್ಲಿ ಪ್ರತಿ ಸೆಕೆಂಡುಗಳ ಸಮಯವೂ ಅತಿ ಮುಖ್ಯ. ತಾಯಿ ಮತ್ತು ತಾಯಿನಾಡಿಗಾಗಿ ಪ್ರಾಣ ತ್ಯಾಗ, ಬಲಿದಾನ ಮಾಡಿ ಭಾರತ ಮಾತೆಯ ಮಡಿಲಿಗೆ ಸೇರುವುದೇ ಬಹುದೊಡ್ಡ ಪುಣ್ಯ ಎಂದು ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಅನುಭವಗಳನ್ನು ಹಂಚಿಕೊಂಡರು. ಪ್ರಾಂಶುಪಾಲರಾದ ಪ್ರವೀಣ್ ಎ ಅವರು 2025- 26ನೇ ಶೈಕ್ಷಣಿಕ ಸಾಲಿನ ಕಾಲೇಜು ವಾರ್ಷಿಕ ವರದಿಯನ್ನು ವಾಚಿಸಿದರು. ಹೆಚ್. ಕೆ .ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಹೆಚ್.ಎಸ್. ಪ್ರಶಾಂತ್ ಗೌಡ ರವರು ಭಾರತ ದೇಶಕ್ಕೆ ಭಾರತೀಯ ಸೈನಿಕರ ಕೊಡುಗೆ ಮತ್ತು ನವೀನ್ ನಾಗಪ್ಪನವರು ಸೇನೆಗೆ ನೀಡಿದ ಕೊಡುಗೆಯನ್ನು ಕುರಿತು ಪ್ರಶಂಸಿದರು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ನಮ್ಮ ಸಂಸ್ಥೆ NEET, JEE, NDA, NATA, NIFT ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಬೇರೆ ಬೇರೆ ಸಂಸ್ಥೆಗಳಲ್ಲಿ ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಯ ಕುರಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹೆಚ್.ಕೆ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹೆಚ್. ಕೆ. ಸುರೇಶ್ ರವರು ಕರಾವಳಿಯ ಶಿಕ್ಷಣವನ್ನು ಹಾಸನಕ್ಕೆ ಕರೆ ತಂದು ಅತ್ಯುತ್ತಮ ಶಿಕ್ಷಣವನ್ನು ನೀಡುತ್ತಿದ್ದೇವೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬೆಳೆಯುವಂತಾಗಬೇಕು ಎಂದು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು.

2024 – 25ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ತರಗತಿಯಲ್ಲಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಸಿಬ್ಬಂದಿಗಳನ್ನು ಗೌರವಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರುಗಳಾದ ಶ್ರೀ ಆದರ್ಶ್ ಎಂ ಕೆ, ಹೆಚ್. ಕೆ. ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀಮತಿ ಕೋಮಲ ಎನ್. ಸುರೇಶ್ ಹಾಗೂ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರೆ ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ಅವರು ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕರಾದ ಗಣೇಶ್ ಕೆ ಭಟ್ ಅವರು ವಂದಿಸಿದರು. ಕನ್ನಡ ಉಪನ್ಯಾಸಕರಾದ ರಮೇಶ್ ಎಂ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ತದನಂತರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ “ಸಿಂದೂರ ಸಂಭ್ರಮ” ಎಂಬ ಪರಿಕಲ್ಪನೆಯ ನೃತ್ಯವೈಭವ ನೆರೆದ ಜನಸ್ತೋಮದ ಮನಸೂರೆಗೊಂಡಿತು.

Leave a Reply

Your email address will not be published. Required fields are marked *