ಕನ್ನಡ ನಾಡು ನುಡಿ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಶ್ರಮಿಸಬೇಕು : ಶ್ರೀ ಅಶ್ವತ್ ಎಸ್. ಎಲ್.
ಕನ್ನಡ ನಾಡು ತನ್ನದೇ ಆದ ಇತಿಹಾಸ ಪರಂಪರೆಯನ್ನು ಹೊಂದಿದ್ದು, ಈ ನಾಡನ್ನು ಕಟ್ಟುವಲ್ಲಿ ಅನೇಕ ಮಹನೀಯರ ತ್ಯಾಗ, ಹೋರಾಟ,ಬಲಿದಾನಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕ. ಕನ್ನಡ ನಾಡಿನ ನೆಲ, ಜಲ, ಭಾಷೆಯನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಕ್ರಿಯೇಟಿವ್ ಸಂಸ್ಥೆಯು ಸಾಹಿತ್ಯ ಕ್ಷೇತ್ರದಲ್ಲಿನ ಮಹನೀಯರನ್ನು ಗುರುತಿಸಿ ಗೌರವಿಸಿ ಅವರ ಸಾಧನೆ ಚಿಂತನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಕ್ರಿಯೇಟಿವ್ ಸಂಸ್ಥೆಯ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್.ಎಲ್. ರವರು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳನ್ನು ಸಲ್ಲಿಸುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಕನ್ನಡ ಉಪನ್ಯಾಸಕರಾದ ಶ್ರೀ ಶಿವಕುಮಾರ್, ಶ್ರೀ ಸಂತೋಷ್ ಹಾಗೂ ವಾಣಿಜ್ಯ ಶಾಸ್ತ್ರದ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಮತ್ತು ನಿಲಯ ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿನಿಯರಿಂದ ಕನ್ನಡ ಗೀತ ಗಾಯನ ನೆರವೇರಿತು.