ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕೈಗಾರಿಕಾ ಕೇಂದ್ರಗಳ ಭೇಟಿ
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲೂ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಹೆಬ್ರಿ ಪರಿಸರದ ಭಾಗ್ಯೋದಯ ರೈಸ್ ಮಿಲ್, ರಾಮಾಂಜನೇಯ ಗೇರುಬೀಜ ಇಂಡಸ್ಟ್ರಿ , ವಿಜಯ ಆಹಾರೋದ್ಯಮ , ರೈತ ಸೇವಾ ಗ್ರಾಮೋದ್ಯೋಗ ಹಾಗೂ ಇನ್ನಿತರ ಕೈಗಾರಿಕೆಗಳಿಗೆ ಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು.
ಕೈಗಾರಿಕಾ ಭೇಟಿ, ರಾಷ್ಟ್ರೀಯ ಸೇವಾ ಯೋಜನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದು ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ವಿಶೇಷ. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಮೇಶ್, ಚಂದ್ರಕಾಂತ್, ಗೀತಾ ಪ್ರಸಾದ್, ನಿಲಯ ಪಾಲಕರದ ಸಂತೋಷ್, ಮತ್ತಿತರರು ಉಪಸ್ಥಿತರಿದ್ದರು.