Follow us:-
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಸಂಭ್ರಮದ ಗಣರಾಜ್ಯೋತ್ಸವ
  • By Creative Media Team
  • January 26, 2025
  • No Comments

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

76 ನೇ ಗಣರಾಜ್ಯೋತ್ಸವವನ್ನು  ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ” ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಸಮಾನತೆಯ ಹಕ್ಕನ್ನು  ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ  ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ  ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು. ” ಎಂದು ವಿದ್ಯಾರ್ಥಿಗಳನ್ನು ಕುರಿತು ಶುಭನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *