ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕ ಪಾಲಕರ ಸಭೆ
2024-25ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕ ಪಾಲಕರ ಸಭೆಯನ್ನು ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ನವೆಂಬರ್ 30ರಂದು ಹಮ್ಮಿಕೊಳ್ಳಲಾಯಿತು. ಪಿಸಿಎಂಬಿ ಹಾಗೂ ಪಿಸಿಎಂಸಿ ವಿಭಾಗಗಳಿಗೆ ಎರಡು ಹಂತಗಳಲ್ಲಿ ಸಭೆಯನ್ನು ನಡೆಸಲಾಯಿತು.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಗಣಪತಿ ಭಟ್ ಕೆ ಎಸ್, ಆದರ್ಶ ಎಂ ಕೆ, ವಿದ್ವಾನ್ ಗಣಪತಿ ಭಟ್, ಡಾ. ಬಿ ಗಣನಾಥ ಶೆಟ್ಟಿ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಶೈಕ್ಷಣಿಕ ಪ್ರಗತಿಯ ಕುರಿತು, ಪಠ್ಯ ವಿಚಾರದ ಕುರಿತು, ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿಗಳನ್ನು ಒದಗಿಸಿದರು.
ವಿದ್ಯಾರ್ಥಿಗಳ ಪೋಷಕವೃಂದದವರು, ಎಲ್ಲ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಕನ್ನಡ ಭಾಷಾ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಮತ್ತು ಸಂತೋಷ ರವರು ಕಾರ್ಯಕ್ರಮ ನಿರೂಪಿಸಿದರು.