Follow us:-
ಹೆಚ್. ಕೆ. ಎಸ್ ಪಿ ಯು. ಕಾಲೇಜಿಗೆ ಶೇಕಡಾ ನೂರು ಫಲಿತಾಂಶದೊಂದಿಗೆ ರಾಜ್ಯಕ್ಕೆ 5 ಹಾಗೂ 8ನೇ ಸ್ಥಾನ
  • By AdminCEF
  • January 29, 2024
  • No Comments

ಹೆಚ್. ಕೆ. ಎಸ್ ಪಿ ಯು. ಕಾಲೇಜಿಗೆ ಶೇಕಡಾ ನೂರು ಫಲಿತಾಂಶದೊಂದಿಗೆ ರಾಜ್ಯಕ್ಕೆ 5 ಹಾಗೂ 8ನೇ ಸ್ಥಾನ

ಕ್ರಿಯೇಟಿವ್‌ ಹಾಸನ:

2022- 2023 ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ನಗರದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳದ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ. ಎಸ್ ಪಿ ಯು ಕಾಲೇಜು ಹಾಸನದ, ಶೇಕಡಾ 100ರಷ್ಟು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪ್ರಸ್ತುತ್ ಪಟೇಲ್ 592 ಅಂಕಗಳೊಂದಿಗೆ ರಾಜ್ಯಕ್ಕೆ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಕೃತ ಭಾಷೆ ಹಾಗೂ ಪಿ. ಸಿ. ಎಂ. ಸಿ ವಿಷಯಗಳಲ್ಲಿ 100ಕ್ಕೆ 100 ಅಂಕಗಳೊಂದಿಗೆ 592 ಅಂಕಗಳನ್ನು ಪಡೆದುಕೊಂಡಿರುವುದು ವಿಶೇಷ ಸಾಧನೆಯಾಗಿದೆ. ರಾಜ್ಯಕ್ಕೆ 5 ನೇ ಸ್ಥಾನ ಪಡೆಯುವುದರ ಜೊತೆಗೆ ಹಾಸನ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವುದು ಕಾಲೇಜಿಗೆ ಹೆಮ್ಮೆಯ ವಿಚಾರವಾಗಿದೆ.
ವಾಣಿಜ್ಯ ವಿಭಾಗದಲ್ಲಿ ದಿವಿತ್ ಪಿ. ಗೌಡ 590 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದ್ದಾರೆ.ನಾಲ್ಕು ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಪಡೆದುಕೊಂದಿರುವುದನ್ನು ಇಲ್ಲಿ ಗಮನಿಸಬಹುದು.

ವಿಜ್ಞಾನ ವಿಭಾಗದಲ್ಲಿ ಚಂದನ ಹೆಚ್. ಎಂ 586, ಆಯುಷ್ ಎಂ. ಎಸ್ 585,ಪ್ರಣವ್ ಪಿ ಸಂಜೀ 584, ಪುಣ್ಯ ಆರ್ 583, ಚಮನ್ ಜಿ 583, ಕುಶಾಲ್ ಡಿ 583 ಗರಿಷ್ಠ ಅಂಕಗಳನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ನಿಧಿ ಕೊಟ್ಟಾರಿ 583,ಕುಷಿ ಎನ್ 581,ಮಹಮ್ಮದ್ ಇಜಾನ್ ಖಾನ್ 580,ಸುಪ್ರಸಿದ್ದ್ ಕಾಂತ್ 577 ಗರಿಷ್ಠ ಅಂಕಗಳನ್ನು ಪಡೆದುಕೊಂಡಿದ್ದಾರೆ.

ಪರೀಕ್ಷೆ ಬರೆದ ಒಟ್ಟು 155 ವಿದ್ಯಾರ್ಥಿಗಳಲ್ಲಿ 110 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 42 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವುದು ವಿಶೇಷ ಸಾಧನೆಯಾಗಿದೆ. ಹಾಸನ ಜಿಲ್ಲೆಯಲ್ಲೇ ಶೇಕಡಾ ನೂರು ಫಲಿತಾಂಶ ಪಡೆದಿರುವ ಕೆಲವೇ ಕಾಲೇಜುಗಳಲ್ಲಿ ಹೆಚ್. ಕೆ.ಎಸ್. ಪಿ ಯು ಕಾಲೇಜು ಅಗ್ರ ಪಂಕ್ತಿಯಲ್ಲಿದೆ.

ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಕೆ. ಸುರೇಶ್ ,ಕಾರ್ಯದರ್ಶಿಗಳಾದ ಶ್ರೀಯುತ ಪ್ರಶಾಂತ್, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳದ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *