ಸಿ.ಎ (CA) ಫೌಂಡೇಶನ್ ಪರೀಕ್ಷೆಯಲ್ಲಿ ಹೆಚ್.ಕೆ.ಎಸ್ ನ ಕೆ.ವಿ ಮೌರ್ಯ ಅದ್ಭುತ ಸಾಧನೆ.
ದೇಶದ ಪ್ರತಿಷ್ಠಿತ ಉದ್ಯೋಗದಲ್ಲಿ ಒಂದಾದ ಚಾರ್ಟರ್ಡ್ ಅಕೌಂಟೆಂಟ್ ಆಗ ಬಯಸುವ ವಿದ್ಯಾರ್ಥಿಗಳಿಗಾಗಿ ಮೂರು ಹಂತದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ಮೊದಲನೇ ಪರೀಕ್ಷೆಯಾದ ಸಿ.ಎ ಫೌಂಡೇಶನ್ ಪರೀಕ್ಷೆಯು ಜೂನ್ 22 ರಿಂದ 26 ರವರೆಗೆ ನಡೆದಿದ್ದು ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ. ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿ ಕೆ . ವಿ. ಮೌರ್ಯ ಪ್ರಥಮ ಪ್ರಯತ್ನದಲ್ಲೇ 273 ಅಂಕಗಳನ್ನು ಪಡೆದು ಉತ್ತೀರ್ಣರಾಗಿ ಅದ್ಭುತ ಸಾಧನೆ ಗೈದು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ ಮತ್ತು ಮುಂದಿನ ಇಂಟರ್ ಮೀಡಿಯೆಟ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.
ಪ್ರಸ್ತುತ ಬಹುಬೇಡಿಕೆಯುಳ್ಳ ಈ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆಗೆ ಹೆಚ್. ಕೆ. ಎಸ್ ವಿದ್ಯಾ ಸಂಸ್ಥೆಯು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್ ನ ಅಡಿಯಲ್ಲಿ ಅತ್ಯುತ್ತಮ ತರಬೇತಿ ನೀಡುತ್ತಿದ್ದು, ಸಿ.ಎ ತರಬೇತಿ ನೀಡುತ್ತಿರುವ ಹಾಸನ ಜಿಲ್ಲೆಯ ಪ್ರಮುಖ ಸಂಸ್ಥೆಯಾಗಿದೆ.
ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್. ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ಅಶ್ವಿನಿ ಸಿ .ಎಲ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.