ಚರ್ಚಾ ಸ್ಪರ್ಧೆಯಲ್ಲಿ ಹೆಚ್ ಕೆ ಎಸ್ ನ ವಿದ್ಯಾರ್ಥಿಗಳ ಅದ್ಬುತ ಸಾಧನೆ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜು ಹಾಸನ. ದಿನಾಂಕ:29.08.2024ನೇ ಗುರುವಾರದಂದು ಸಹಕಾರ ಚಳುವಳಿಯ ಸಾಧನೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಮತ್ತು ಚಳುವಳಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಹಾಸನ ಜಿಲ್ಲಾ ಸಹಕಾರ ಯೂನಿಯನ್ (ನಿ), ಹಾಸನ ಇವರ ವತಿಯಿಂದ ಹಾಸನ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರ ಅಂಗವಾಗಿ ನಡೆದ ಚರ್ಚಾ ಸ್ಪರ್ಧೆಯಲ್ಲಿ
ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಯ ಗೌತಮ್ ಸಿ ವೈ ಮತ್ತು ಪ್ರಥಮ ಪಿಯುಸಿ ಯ ಅಕ್ಷರ ಎಲ್ ಪ್ರಥಮ ಬಹುಮಾನವನ್ನು ಪಡೆದು ಅದ್ಭುತ ಸಾಧನೆಗೈದಿದ್ದಾರೆ ವಿಜೇತರನ್ನು ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ. ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.