- By Creative Edu Web Admin
- January 24, 2024
- No Comments
ಹೆಚ್. ಕೆ. ಎಸ್ ನಲ್ಲಿ ವೈಭವದ ಗುರುದೇವೋ ಭವ ಕಾರ್ಯಕ್ರಮ
ದಿನಾಂಕ 6/09/2023 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜ್, ಹಾಸನ ಇಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ” ಗುರು ದೇವೋ ಭವ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಬೇಲೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಹೆಚ್. ಕೆ. ಸುರೇಶ್ ಅವರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರವನ್ನು ವಿವರಿಸುತ್ತಾ ಭವಿಷ್ಯದ ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಕೊಡುಗೆ ಅಧಮ್ಯ ಎಂದು ಅಭಿಪ್ರಾಯಪಟ್ಟರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ,ಕಾರ್ಕಳ ಇದರ ಸಹ ಸಂಸ್ಥಾಪಕರಾದ ಶ್ರೀ ಅಶ್ವಥ್ ಎಸ್.ಎಲ್ ಇವರು ಶಿಕ್ಷಕರಾದವರು ಆದರ್ಶ ಗುಣಗಳನ್ನು ಪಾಲಿಸಿ ಮಕ್ಕಳಿಗೆ ಮಾದರಿಯಾಗುವುದರ ಮೂಲಕ ನೈತಿಕ ಶಿಕ್ಷಣ ಬಿತ್ತುವಂತೆ ಸಲಹೆ ಇತ್ತರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಸನ್ಮಾನವನ್ನು ಸ್ವೀಕರಿಸಿದ ಪೋದರ್ ಇಂಟರ್ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀ ಜೋಷುವ ಪ್ರೇಮ್ ಸ್ವರೂಪ್, ಮಾಡೆಲ್ ಇಂಗ್ಲೀಷ್ ಸ್ಕೂಲ್ ಜಾವಗಲ್ ಇದರ ಕಾರ್ಯದರ್ಶಿಗಳಾದ ಡಾ. ವಿನಾಯಕ ಸಿಂಡಿಗೆರೆ ಮತ್ತು ರಾಧಾಕೃಷ್ಣ ವಿದ್ಯಾ ಶಾಲೆ, ಚನ್ನರಾಯ ಪಟ್ಟಣ ಇಲ್ಲಿನ ಪ್ರಾಂಶುಪಾಲರಾದ ಶ್ರೀ ಕಾರ್ತಿಕ್ ಸೆಲ್ವರಾಜ್ ಇವರುಗಳು ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನದ ಮಹತ್ವವನ್ನು ತಿಳಿಸುತ್ತಾ ಅಭಿನಂದನಾ ನುಡಿಗಳನ್ನಾಡಿದರು. ಪ್ರಾಂಶುಪಾಲರಾದ ವಿಮಲ್ ರಾಜ್ ಜಿ. ಇವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಯನ್ನು ಹೊರ ತರುವಲ್ಲಿ ಶಿಕ್ಷಕರ ಪಾತ್ರವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರದ ಶ್ರೀ ಆದಿತ್ಯ ವಟಿ .ಕೆ ಮತ್ತು ಜೀವಶಾಸ್ತ್ರ ಉಪನ್ಯಾಸಕರಾದ ಶ್ರೀ ರಂಜಿತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ,ಕಾರ್ಕಳ ಇದರ ಸಹ ಸಂಸ್ಥಾಪಕರಾದ ಶ್ರೀ ಗಣಪತಿ ಭಟ್, ಇವರು ವಿವಿಧ ಸಂಸ್ಕೃತಿಯ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಶ್ರೀ ರಮೇಶ್ ಎಂ ಮತ್ತು ವಿದ್ಯಾರ್ಥಿನಿ ಇಂಚರಾ ಪಟೇಲ್ ನಿರೂಪಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶ್ರೀ ವಿಘ್ನೇಶ್ ಕಾಮತ್ ನೆರವೇರಿಸಿ ಕೊಟ್ಟರು. ವಿದ್ಯಾರ್ಥಿನಿ ರೇಷ್ಮಾ ಜಿ.ಕೆ ವಂದನಾರ್ಪಣೆ ಗೈದರು. ಸಮಾರಂಭದಲ್ಲಿ ಸರ್ವ ಶಿಕ್ಷರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ., ಉಪನ್ಯಾಸ ವರ್ಗ, ಭೋದಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.