ಜೆ.ಇ.ಇ (Mains ) ಪ್ರವೇಶ ಪರೀಕ್ಷೆಯಲ್ಲಿ ಹೆಚ್. ಕೆ. ಎಸ್.ನ ವಿದ್ಯಾರ್ಥಿಗಳ ಸಾಧನೆ
ದೇಶದ ಅತ್ಯುನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ, ಐ ಐ ಐ ಟಿ, ಸಿ.ಎಫ್.ಟಿ.ಐ ಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಜನವರಿ 27 ರಿಂದ ಫೆಬ್ರವರಿ 1 ರ ವರೆಗೆ ನಡೆದ ಜೆ.ಇ.ಇ (Mains) ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್. ಕೆ. ಎಸ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್’ನ ಅಡಿಯಲ್ಲಿ ತರಬೇತಿಯನ್ನು ಪಡೆದು ಪ್ರಥಮ ಪ್ರಯತ್ನದಲ್ಲೇ ಈ ಅದ್ಭುತ ಸಾಧನೆ ಗೈದಿದ್ದಾರೆ .
ಕಾಲೇಜಿನ ವಿದ್ಯಾರ್ಥಿಗಳಾದ, ಆನ್ಯ ಡಿ. ಜೆ ಗೌಡ 97.7325541, ಸಿ. ಜ್ಞಾನಶ್ರೀ ಕುಮಾರ್ 96.71557302, ಹೇಮಂತ್ ಕೆ. ಪಿ 96.3354563, ಚಕ್ಷು 94.8320435, ಅಮೂಲ್ಯ ಎಸ್. ಜೆ 94.6260506 ಅಂಕಗಳನ್ನು ಪಡೆದು ಸಾಧನೆಗೈದಿದ್ದು ಉಳಿದಂತೆ 18 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಪಡೆದುಕೊಂಡಿದ್ದು, ಮುಂದಿನ ಹಂತದ ಜೆ. ಇ. ಇ ಅಡ್ವಾನ್ಸ್ಡ್ (JEE Advanced) ಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಪ್ರಸ್ತುತ ಬಹುಬೇಡಿಕೆಯುಳ್ಳ ಈ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆಗೆ ಹೆಚ್. ಕೆ. ಎಸ್ ವಿದ್ಯಾ ಸಂಸ್ಥೆಯು ಕ್ರಿಯೇಟಿವ್ ಲರ್ನಿಂಗ್ ಕ್ಲಾಸಸ್’ನ ಅಡಿಯಲ್ಲಿ ಅತ್ಯುತ್ತಮ ತರಬೇತಿ ನೀಡುತ್ತಿದ್ದು, ಜೆ.ಇ.ಇ ಮೈನ್ಸ್ ಮತ್ತು ಅಡ್ವಾನ್ಸ್ಡ್ ಗೆ ತರಬೇತಿ ನೀಡುತ್ತಿರುವ ಹಾಸನ ಜಿಲ್ಲೆಯ ಪ್ರಮುಖ ಸಂಸ್ಥೆಯಾಗಿದೆ. ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಕೆ.ಸುರೇಶ್ ,ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್.ಪ್ರಶಾಂತ್ ಗೌಡ,ಆಡಳಿತ ಮಂಡಳಿ , ಪ್ರಾಂಶುಪಾಲರು, ಸಂಯೋಜಕರಾದ ವಿಜಯ್. ಬಿ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.