ಹೆಚ್.ಕೆ. ಎಸ್ ಪಿಯು ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ
ದಿನಾಂಕ : 14/09/2024 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ.ಯು ಕಾಲೇಜು, ಇಲ್ಲಿ ಹಿಂದಿ ಪರ್ವ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗಂಜಲಗೂಡಿನ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀ ಬಸವರಾಜು ಎಚ್. ಎಸ್ ಅವರು ಕಾರ್ಯಕ್ರಮವನ್ನು ಕುರಿತು ಹಿಂದಿ ಭಾಷೆಯ ಉಗಮ, ಬೆಳವಣಿಗೆ, ಭಾಷೆಯ ಸ್ವರೂಪ, ಮತ್ತು ಹಿಂದಿ ಭಾಷೆಯ ಮಹತ್ವವನ್ನು ಕುರಿತು ಮಾತನಾಡಿದರು. ಅಧ್ಯಕ್ಷೀಯ ನೆಲೆಯಲ್ಲಿ ಮಾತಾನಾಡಿದ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಸರ್ವ ಭಾಷೆಯನ್ನು ಗೌರವಿಸುವುದು ನಮ್ಮ ದೇಶದ ವಿಶೇಷತೆ ಮತ್ತು ಏಕತೆಯನ್ನು ಸಾರುತ್ತದೆ ಎಂದು ಅಭಿಪ್ರಾಯ ಪಟ್ಟರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಹಿಂದಿ ಉಪನ್ಯಾಸಕರಾದ ಅರುಣ್ ಜಾಧವ್ ಅವರು ಹಿಂದಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿನಿ ಪರಿಣಿಕಾ ಅವರು ಅತಿಥಿಗಳನ್ನು ಸ್ವಾಗತಿಸಿದರೆ ವಿದ್ಯಾರ್ಥಿಯಾದ ಶುಭಾ ವಂದಿಸಿದರು. ವಿದ್ಯಾರ್ಥಿಗಳಾದ ತನಿಷ ಮತ್ತು ತ್ರಿಶಲಾ ಗಾಂಧಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.