ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ ಮಾಹಿತಿ ಕಾರ್ಯಗಾರ .
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾಸನ ಇಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ (ಎನ್.ಡಿ. ಎ ) ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾದ ಹೆಚ್. ಕೆ. ಎಸ್ ಪಿ ಯು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಅನೀಶ್ ಮ್ಯಾಥ್ಯು ಅವರು ಎನ್ ಡಿ ಎ ಪರೀಕ್ಷೆಯ ಪೂರ್ವ ತಯಾರಿ ಹಾಗೂ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಶ್ರೀ ವಿಮಲ್ ರಾಜ್ ಜಿ ಅವರು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ತಿಳಿಸಿದರು.
ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶ್ರೀ ಆದಿತ್ಯವಟಿ ಕೆ , ಎನ್ ಡಿ ಎ ಸಂಯೋಜಕರಾದ ರಕ್ಷಿತ್ ಬಿ.ಎಸ್ ಅವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.