ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ಮಾಹಿತಿ ಕಾರ್ಯಗಾರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾಸನ ಇಲ್ಲಿ ಮಾಹಿತಿ ಕಾರ್ಯಗಾರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ಥ್ ಎಸ್ ಎಲ್ ಅವರು ವಿದ್ಯಾರ್ಥಿಗಳು ಚಂಚಲ ಸ್ವಭಾವವನ್ನು ಬಿಟ್ಟು ಏಕಾಗ್ರತೆಯಿಂದ ಶಿಕ್ಷಣ ಪಡೆಯುವುದು, ಪದವಿ ಪೂರ್ವ ಶಿಕ್ಷಣದ ಮಹತ್ವ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಹೆಚ್ ಕೆ ಸುರೇಶ್ ಅವರು ವೈದ್ಯಕೀಯ ಪ್ರವೇಶ ಪರೀಕ್ಷೆ, ಜೆ ಇ ಇ ಪರೀಕ್ಷೆ ಇನ್ನೂ ಹಲವು ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ನೆರವೇರಿಸಿ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಹೆಚ್.ಕೆ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಹಾಸನ ಇದರ ಪ್ರಧಾನ ಕಾರ್ಯದರ್ಶಿಗಳಾದ ಹೆಚ್. ಕೆ. ಸುರೇಶ್, ಹೆಚ್.ಎಸ್. ಪ್ರಶಾಂತ್ ಗೌಡ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್.ಎಲ್, ಶ್ರೀ ಆದರ್ಶ್ ಎಂ.ಕೆ. ಶ್ರೀ ವಿಮಲ್ ರಾಜ್ ಜಿ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಉಪಪ್ರಾಂಶುಪಾಲರಾದ ಶ್ರೀ ಆದಿತ್ಯ ವಟಿ ಕೆ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ರಮೇಶ್ ಎಂ ನಿರೂಪಿಸಿದರು. ಪ್ರಾಂಶುಪಾಲರಾದ ಪ್ರವೀಣ್ ಎ ಅವರು ಸ್ವಾಗತಿಸಿದರೆ ಉಪಪ್ರಾಂಶುಪಾಲರಾದ ಆದಿತ್ಯ ವಟಿ.ಕೆ. ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.