ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಹೆಚ್.ಕೆ.ಎಸ್ ನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜು ಹಾಸನ. ದಿನಾಂಕ: 09-12-2024ನೇ ಸೋಮವಾರದಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ 2024- 25ನೇ ಶೈಕ್ಷಣಿಕ ಸಾಲಿನ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಅಂಗವಾಗಿ ನಡೆದ ಚರ್ಚಾ ಸ್ಪರ್ಧೆ(ಆಂಗ್ಲ)ಯಲ್ಲಿ ಅಕ್ಷರ ಸಿ ಎಲ್ ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಆಶುಭಾಷಣ ಸ್ಪರ್ಧೆಯಲ್ಲಿ ಸ್ವರೂಪ ಸಿ ಎನ್ ತೃತೀಯ ಬಹುಮಾನವನ್ನು ಪಡೆದು ಅದ್ಭುತ ಸಾಧನೆಗೈದಿದ್ದಾರೆ.
ವಿಜೇತರನ್ನು ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ಪ್ರವೀಣ ಎಮ್ ಜಿ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.