ಹೆಚ್ ಕೆ ಎಸ್ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾಸನ ಇಲ್ಲಿ ಸರದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕರಾದ ರಮೇಶ್ ಎಂ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದಲ್ಲಿನ ಎಲ್ಲಾ ಸಂಸ್ಥಾನಗಳನ್ನು ಒಟ್ಟುಗೂಡಿಸಿ ರಾಷ್ಟ್ರದಲ್ಲಿಯೇ ಏಕತೆಯನ್ನು ಮೂಡಿಸಿದ ಮಹಾನ್ ವ್ಯಕ್ತಿ, ರಾಷ್ಟ್ರಕ್ಕೆ ಪಟೇಲರ ಕೊಡುಗೆ ಮಹನೀಯವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಉಪ ಪ್ರಾಂಶುಪಾಲರಾದ ಶ್ರೀ ಆದಿತ್ಯ ವಟಿ ಕೆ ಅವರು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯನ್ನು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳಿಗೆ ಬೋಧಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.