ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿವೃತ್ತ ಸರ್ಕಾರಿ ನೌಕರರು, ಹಾಸನ ಜಿಲ್ಲಾ ಸಾಕ್ಷರತಾ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಸೈಯದ್ ಸಜ್ಜದ್ ಪಾಷ ಅವರು ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವಂತಿಲ್ಲ, ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು, ವಾಹನ ಪರವಾನಗಿ ವಾಹನ ವಿಮೆ ಮತ್ತು ವಾಯುಮಾಲಿನ್ಯ ತಪಾಸಣಾ ಪರೀಕ್ಷೆಯ ಪತ್ರವು ವಾಹನ ಚಲಾಯಿಸುವ ಪ್ರತಿಯೊಬ್ಬರಿಗೂ ಮುಖ್ಯವಾದದ್ದು, ಸಂಚಾರಿ ನಿಯಮದ ಪಾಲನೆ, ಆರ್ ಟಿ ಓ ಕಾನೂನು ಸಲಹೆಗಳನ್ನು ಕುರಿತು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಸ್ಕೃತ ಉಪನ್ಯಾಸಕರಾದ ರವಿಶಂಕರ್ ಹೆಗಡೆ ಅವರು ನಿರೂಪಿಸಿ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.