ಹೆಚ್ ಕೆ ಎಸ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪೋಷಕ ಸಭೆ ಕಾರ್ಯಕ್ರಮ.
ದಿನಾಂಕ:14-10-2024 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಡಾ. ಬಿ. ಗಣನಾಥ ಶೆಟ್ಟಿ ಅವರು ದೀಪ ಹೇಗೆ ಪ್ರಜ್ವಲಿಸುತ್ತದೆಯೋ ಹಾಗೆ ನಮ್ಮ ವಿದ್ಯಾರ್ಥಿಗಳು ಪ್ರಕಾಶಮಾನವಾಗಿ ಪ್ರಜ್ವಲಿಸುತ್ತಿದ್ದಾರೆ. ಹೆಚ್ ಕೆ ಎಸ್ ಪಿಯು ಕಾಲೇಜು ಪಠ್ಯಕ್ರಮದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ, ನಾಟ, ಸಿ.ಎ ಮತ್ತು ಸಿಎಸ್ ನಂತಹ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳು ಜೆ.ಇ.ಇ ಅಡ್ವಾನ್ಸ್ ನಂತಹ ಕ್ಲಿಷ್ಟಕರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಐ.ಐ.ಟಿ ಗಳಲ್ಲಿ ಪ್ರವೇಶ ಪಡೆದಿರುವುದು ಹೆಮ್ಮೆಯ ಸಂಗತಿ. ಶಿಕ್ಷಕರ ಮತ್ತು ಪೋಷಕರ ಜವಾಬ್ದಾರಿಗಳ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು ಪೋಷಕರ ಪಾತ್ರ ಮುಖ್ಯವಾದದ್ದು. ಪ್ರಸ್ತುತ ಶೈಕ್ಷಣಿಕ ವರ್ಷದ ಆಡಳಿತ ವ್ಯವಸ್ಥೆ ಮತ್ತು ವಸತಿ ನಿಲಯಗಳ ಕುರಿತು ಮಾಹಿತಿ ನೀಡಿದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ನಮ್ಮ ಸಂಸ್ಥೆಯಲ್ಲಿ ಶಿಸ್ತಿನ ಜೊತೆಗೆ ಗುಣಮಟ್ಟದ ಬೋಧನೆಯನ್ನು ನೀಡಲಾಗುತ್ತಿದೆ. ಪದವಿಪೂರ್ವ ಶಿಕ್ಷಣವು ಜೀವನದ ಮುಖ್ಯ ಹಂತವಾಗಿದೆ. ವಿದ್ಯಾರ್ಥಿಗಳು ಉತ್ತಮವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಕಾಲೇಜಿನ ನಿಯಮಗಳ ಕುರಿತು ಮಾಹಿತಿ ನೀಡಿದರು. ಉಪ ಪ್ರಾಂಶುಪಾಲರಾದ ಶ್ರೀ ಆದಿತ್ಯ ವಟಿ ಕೆ ಅವರು ಶೈಕ್ಷಣಿಕ ವರ್ಷದ ಪ್ರಶ್ನೆ ಪತ್ರಿಕೆ, ನೀಲ ನಕ್ಷೆ, ಪರೀಕ್ಷೆಯ ಸಿದ್ಧತೆಯ ಕುರಿತು ಮಾಹಿತಿ ನೀಡುವುದರ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಅರ್ಥಶಾಸ್ತ್ರ ಉಪನ್ಯಾಸಕರಾದ ಮಹೇಶ್ ಕೆ ಎನ್ ಅವರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ರಮೇಶ್ ಎಂ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಕೃತ ಉಪನ್ಯಾಸಕರಾದ ರವಿಶಂಕರ್ ಹೆಗಡೆ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ,ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು