ಹೆಚ್ ಕೆ ಎಸ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪೋಷಕ ಸಭೆ ಕಾರ್ಯಕ್ರಮ.
ದಿನಾಂಕ:02-10-2024 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ-ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ಗಣಪತಿ ಕೆ ಎಸ್ ಅವರು ಕಳೆದ ಐದು ವರ್ಷಗಳಿಂದ ಹೆಚ್ ಕೆ ಎಸ್ ಪದವಿ ಪೂರ್ವ ಕಾಲೇಜು ಹಾಸನದಲ್ಲಿಯೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆ. ಇ. ಇ, ಕೆ.ಸಿ.ಇ.ಟಿ, ಎನ್.ಡಿ. ಎ, ಸಿ ಎ ಫೌಂಡೇಶನ್ ನಂತಹ ಪರೀಕ್ಷೆಗಳಿಗೆ ಉತ್ತಮವಾದ ತರಬೇತಿ ನೀಡುತ್ತಿರುವ ಏಕೈಕ ಸಂಸ್ಥೆಯಾಗಿದೆ. ವಿಜ್ಞಾನ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಜೆ.ಇ.ಇ ಮತ್ತು ವಾಣಿಜ್ಯ ವಿಭಾಗದಲ್ಲಿನ ಸಿ ಎ, ಸಿ ಎಸ್ ಪರೀಕ್ಷೆಗಳ ಮಹತ್ವ, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಪೂರ್ಣ ಶೈಕ್ಷಣಿಕ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಶಿಕ್ಷಣದ ಜೊತೆಗೆ ಆಹಾರದ ಗುಣಮಟ್ಟದ ಬಗ್ಗೆ ತಿಳಿಯಪಡಿಸಿದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಪ್ರಸ್ತುತ ದಿನಗಳ ತುರ್ತು ಮತ್ತು ಸವಾಲುಗಳ ಕುರಿತು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಉಪ ಪ್ರಾಂಶುಪಾಲರಾದ ಶ್ರೀ ಆದಿತ್ಯ ವಟಿ ಕೆ ಅವರು ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ, ಶಿಕ್ಷಣದ ಜವಾಬ್ದಾರಿಯ ಕುರಿತು ತಿಳಿಯ ಹೇಳಿದರು.
ಸಭಾ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ಅವರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ರಮೇಶ್ ಎಂ ಅವರು ನಿರೂಪಿಸಿದರೆ, ಸಂಸ್ಕೃತ ಉಪನ್ಯಾಸಕರಾದ ರವಿಶಂಕರ್ ಹೆಗಡೆ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.