New CREST 2026 — Creative Entrance & Scholarship Test | I PUC 2027 Admissions Open | Top 100 Students Eligible for Scholarships Apply Now

ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ ಮಾಹಿತಿ ಕಾರ್ಯಗಾರ .

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾ…

ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ ಮಾಹಿತಿ ಕಾರ್ಯಗಾರ .

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ  ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾಸನ ಇಲ್ಲಿ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ (ಎನ್.ಡಿ. ಎ ) ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾದ ಹೆಚ್. ಕೆ. ಎಸ್ ಪಿ ಯು ಕಾಲೇಜಿನ ಭೌತಶಾಸ್ತ್ರ  ಉಪನ್ಯಾಸಕರಾದ ಅನೀಶ್ ಮ್ಯಾಥ್ಯು ಅವರು ಎನ್ ಡಿ ಎ ಪರೀಕ್ಷೆಯ ಪೂರ್ವ ತಯಾರಿ ಹಾಗೂ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಶ್ರೀ ವಿಮಲ್ ರಾಜ್ ಜಿ ಅವರು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿಯ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ತಿಳಿಸಿದರು.

ವೇದಿಕೆಯಲ್ಲಿ   ಉಪಪ್ರಾಂಶುಪಾಲರಾದ ಶ್ರೀ ಆದಿತ್ಯವಟಿ ಕೆ , ಎನ್ ಡಿ ಎ ಸಂಯೋಜಕರಾದ ರಕ್ಷಿತ್ ಬಿ.ಎಸ್ ಅವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು  ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Share