ಕಲ್ಯಾಣಪುರ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ
ದಿನಾಂಕ 18/07/2024ರಂದು ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ವಕೀಲರಾದ ಶ್ರೀ ಅಶೋಕ ಎಸ್. ಬಿ ಯುವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದರೆ ಅದಕ್ಕೆ ಭಾರತೀಯ ದಂಡ ಸಂಹಿತೆಯಲ್ಲಿ ಕಠಿಣ ಕಾನೂನುಗಳಿವೆ ಮತ್ತು ಘೋರ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಬಹಳಷ್ಟು ಎಚ್ಚರಿಕೆಯಿಂದ ಇರಬೇಕೆಂದು ಕಿವಿಮಾತು ಹೇಳಿದರು ಈ ದೇಶದ ಕಾನೂನನ್ನೂ ಗೌರವಿಸಿ ಮೌಲ್ಯಗಳನ್ನು ಉಳಿಸಿ ದೇಶಕ್ಕೆ ಉತ್ತಮ ಕೊಡುಗೆ ನೀಡುವಂತಾಗಲಿ ಎಂದು ಹಾರೈಸಿದರು
ಕಾರ್ಯಕ್ರಮದಲ್ಲಿ ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ರಾಮಕೃಷ್ಣ ಹೆಗಡೆ, ಆಡಳಿತಾಧಿಕಾರಿ ಜಯಪ್ರಕಾಶ್ ಶೆಟ್ಟಿ, ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು