ಹೆಚ್.ಕೆ.ಎಸ್ ಪಿ ಯು ಕಾಲೇಜಿನಲ್ಲಿ CLAT ಪರೀಕ್ಷೆಯ ಮಾಹಿತಿ ಕಾರ್ಯಗಾರ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ದೇಶದ ಪ್ರತಿಷ್ಠಿತ ಕಾನೂನು ವಿದ್ಯಾಲಯಗಳ ಐದು ವರ್ಷದ ಕಾನೂನು ಪದವಿ ಕೋರ್ಸುಗಳ ಪ್ರವೇಶಾತಿಗಾಗಿ ನಡೆಯುವ ಪರೀಕ್ಷೆಯ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾದ ಉಡುಪಿಯ ವಿ ರೀಚ್ ಅಕಾಡೆಮಿಯ ಸ್ಥಾಪಕರಾದ ಸಿ ಎಸ್ ಸಂತೋಷ್ ಪ್ರಭು ಅವರು ಕಾನೂನು ಸೇವೆಗಳ ಮಹತ್ವ ಹಾಗೂ CLAT ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಪ್ರಸ್ತುತ ಕಾನೂನು ವಿದ್ಯಾರ್ಥಿಗಳಿಗೆ ಇರುವ ಅವಕಾಶಗಳನ್ನು ತಿಳಿಸುತ್ತಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರವೀಣ್ ಎ ಹಾಗೂ ಸಂಯೋಜಕರಾದ ರಕ್ಷಿತ್ ಬಿ ಎಸ್ ಅವರು ಉಪಸ್ಥಿತರಿದ್ದರು. ಗಣಕ ವಿಜ್ಞಾನ ಉಪನ್ಯಾಸಕರಾದ ಮಹೇಶ್ ಕುಮಾರ್ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.