ಹೆಚ್ .ಕೆ .ಎಸ್ ಪಿ ಯು ಕಾಲೇಜಿನಲ್ಲಿ ಜೆ.ಇ.ಇ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು ಹಾಸನ ಇಲ್ಲಿ ಜೆ.ಇ.ಇ (mains) ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ಆದಿತ್ಯ ವಟಿ ಕೆ ಅವರು ವಿದ್ಯಾರ್ಥಿಗಳನ್ನು ಕುರಿತು ಪರಿಶ್ರಮದಿಂದ ಮಾತ್ರ ಪರೀಕ್ಷೆಯನ್ನು ಎದುರಿಸಲು ಸಾಧ್ಯ, ಪರೀಕ್ಷೆಯಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯವಿದ್ದರೆ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ಜೆ ಇ ಇ, ಕೆ ಸಿ ಇ ಟಿ, ನೀಟ್ ಹಾಗೂ ಸಿ ಎ ಫೌಂಡೇಶನ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುತ್ತ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಜೆ.ಇ.ಇ ಸಾಧಕರುಗಳಿಗೆ ಶುಭ ಕೋರುತ್ತಾ ವಿದ್ಯಾರ್ಥಿಗಳಿಗೆ ಪರೀಕ್ಷೆಯು ಕೇವಲ ಭೌತಿಕ ಕಾರ್ಯವಾಗಿರದೆ ಮಾನಸಿಕ ಸದೃಢತೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು. ವಾರ್ಷಿಕ ಪರೀಕ್ಷೆಗೆ ವಿದ್ಯಾರ್ಥಿಗಳು ಅಭ್ಯಾಸದಲ್ಲಿ ತೊಡಗಿಸಿಕೊಂಡು
ನೂರಕ್ಕೆ ನೂರು ಫಲಿತಾಂಶವನ್ನು ಪಡೆಯಬೇಕೆಂದು ಅಧ್ಯಕ್ಷೀಯ ನುಡಿಗಳನ್ನಾಡಿದರು. ಪ್ರಾಂಶುಪಾಲರಾದ ಪ್ರವೀಣ್ ಎ ಅವರು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ಶುಭ ಹಾರೈಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಜೆ ಇ ಇ (mains)2025- ಸೆಶನ್ 1 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಸನ್ಮಾನವನ್ನು ನೆರವೇರಿಸಲಾಯಿತು.
ಸಭಾ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ರಮೇಶ್ ಎಂ ನಿರೂಪಿಸಿದರು. ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ಅವರು ಸ್ವಾಗತಿಸಿದರೆ ಸಂಸ್ಕೃತ ಉಪನ್ಯಾಸಕರಾದ ರವಿಶಂಕರ ಹೆಗಡೆ ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು