Follow us:-
ಹೆಚ್.ಕೆ.ಎಸ್ ಪಿ ಯು ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮ.
  • By CREATIVE ADMIN
  • September 19, 2025
  • No Comments

ಹೆಚ್.ಕೆ.ಎಸ್ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮ.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ಮಾತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಬಾಬರ್ ಅಲಿ ತಮ್ಮ ಬಾಲ್ಯದಲ್ಲಿಯೇ ಬಡತನದಲ್ಲಿ ಬೆಳೆದು, ಶಾಲೆಯನ್ನು ತೆರೆದು 16ನೇ ವಯಸ್ಸಿನಲ್ಲಿಯೇ ವಿಶ್ವದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯರೆಂದು ಗುರಿತಿಸಲ್ಪಟ್ಟವರು ಎಂದು ಪ್ರಶಂಸಿಸುತ್ತ ಪ್ರಸ್ತಾವಿಕ ನುಡಿಗಳನ್ನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪಶ್ಚಿಮ ಬಂಗಾಳದ ಶಿಕ್ಷಣ ತಜ್ಞ ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಶ್ರೀ ಬಾಬರ್ ಅಲಿ ಅವರು ಸ್ವಾಮಿ ವಿವೇಕಾನಂದರ ಆದರ್ಶ ಗುಣವನ್ನು ಇಟ್ಟುಕೊಂಡು ತಾನು ಬೆಳೆದು ಬಂದ ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಶಿಕ್ಷಣದ ಬಗ್ಗೆ ಇದ್ದ ಒಲವು, ಶೈಕ್ಷಣಿಕ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಬಗೆ, ಶಿಕ್ಷಣದ ಮಹತ್ವವನ್ನು ತಿಳಿಸುತ್ತಾ ಶಿಕ್ಷಣ ಮನುಷ್ಯನ ಮಾನವೀಯ ಧರ್ಮ ಎನ್ನುತ್ತಾ ರಾಮಕೃಷ್ಣ ಮಿಷನ್ ಸಂಸ್ಥೆಯ ಪ್ರೇರಣೆಯೊಂದಿಗೆ ಒಂಬತ್ತು ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದೇವೆ ಎಂದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ಬಾಬರ್ ಅಲಿ ಅವರ ಶೈಕ್ಷಣಿಕ ಗುರಿ ಮತ್ತು ಸಾಧನೆಯನ್ನು ಕುರಿತು ಕಾರ್ಯಕ್ರಮವನ್ನುದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಕಾರ್ಯಕ್ರಮವನ್ನು ಇಂಗ್ಲಿಷ್ ಉಪನ್ಯಾಸಕರಾದ ಚಿಂತನ್ ಬಿ ಆರ್ ಅವರು ನಿರೂಪಿಸಿದರು. ಇಂಗ್ಲಿಷ್ ಉಪನ್ಯಾಸಕರಾದ ವಿಕಾಸ್ ಹೆಚ್ ವಿ ಸ್ವಾಗತಿಸಿದರೆ, ಇಂಗ್ಲಿಷ್ ಉಪನ್ಯಾಸಕರಾದ ಶ್ರೀನಿವಾಸ್ ಜೆ ಎನ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *