ಹೆಚ್.ಕೆ.ಎಸ್ ಪಿಯು ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ
ದಿನಾಂಕ : 20/09/2025 ರಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ.ಯು ಕಾಲೇಜು, ಇಲ್ಲಿ ಹಿಂದಿ ಪರ್ವ ದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾರನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಶಶಿಧರ್ ಸಿಂಹ ಅವರು ಹಿಂದಿ ಭಾಷೆಯ ಮಹತ್ವವನ್ನು ತಿಳಿಸುತ್ತಾ ಹಿಂದಿ ಭಾಷೆಯು ಸಾಹಿತ್ಯಕ್ಕೆ ನೀಡಿರುವ ಕೊಡುಗೆ, ಸಾಹಿತ್ಯಕ್ಕೆ ಸಿಕ್ಕಿರುವ ಗೌರವ ಪುರಸ್ಕಾರ, ಹಿಂದಿ ಭಾಷೆಯ ಮಹಾನ್ ಸಾಹಿತಿಗಳ ಸಾಧನೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಅವರು ನಮ್ಮ ದೇಶ ರಾಷ್ಟ್ರೀಯ ಭಾವೈಕ್ಯತೆಯನ್ನು ಹೊಂದಿದ್ದು ಎಲ್ಲಾ ಭಾಷೆಗಳು ತನ್ನದೇ ಆದ ಪ್ರಾಮುಖ್ಯತೆ ಹೊಂದಿವೆ, ಎಲ್ಲಾ ಭಾಷೆಗಳನ್ನು ಗೌರವಿಸಬೇಕು ಎಂದು
ಅಧ್ಯಕ್ಷೀಯ ನೆಲೆಯಲ್ಲಿ ಮಾತಾನಾಡಿದರು. ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಸರ್ವ ಭಾಷೆಯನ್ನು ಗೌರವಿಸುವುದು ನಮ್ಮ ದೇಶದ ವಿಶೇಷತೆ ಮತ್ತು ಏಕತೆಯನ್ನು ಸಾರುತ್ತದೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹಿಂದಿ ಉಪನ್ಯಾಸಕರಾದ ಅರುಣ್ ಜಾಧವ್ ಅವರು ಹಿಂದಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಹಿಂದಿ ಭಾಷೆಯನ್ನು ಬೆಳೆಸುವುದು ವಿದ್ಯಾರ್ಥಿಗಳ ಜವಾಬ್ದಾರಿ ಎಲ್ಲಾ ಭಾಷೆಯು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿರುತ್ತದೆ, ರಾಷ್ಟ್ರದ ಎಲ್ಲಾ ಭಾಷೆಗಳನ್ನು ಗೌರವಿಸಬೇಕೆಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ನೂರ್ ಆಯಿಶಾ ಸ್ವಾಗತಿಸಿದರು, ವಿದ್ಯಾರ್ಥಿನಿಯಾದ ಸ್ವಾತಿಕ್ ಸುರೇಲ್ ವಂದಿಸಿದರು. ವಿದ್ಯಾರ್ಥಿನಿಯಾದ ಅಕ್ಷರ ಎಲ್ ಕಾರ್ಯಕ್ರಮವನ್ನು ನಿರೂಪಿಸಿದರು.