ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಹೆಚ್. ಕೆ. ಎಸ್ ನ ವಿದ್ಯಾರ್ಥಿಗಳ ಅದ್ಭುತ ಸಾಧನೆ
ದೇಶದ ಪ್ರತಿಷ್ಠಿತ ತಾಂತ್ರಿಕ ಸಂಸ್ಥೆಗಳಾದ IIT, IIST, IISc ಮುಂತಾದ ಸಂಸ್ಥೆಯಲ್ಲಿ ಬಿ.ಟೆಕ್ (B. Tech) ಪದವಿ ಪ್ರವೇಶಕ್ಕೆ ನಡೆಯುವ ಜೆ.ಇ.ಇ ಅಡ್ವಾನ್ಸ್ಡ್ (JEE ADVANCED) -2025 ಪರೀಕ್ಷೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್ ಎಸ್ ರಾಷ್ಟ್ರಮಟ್ಟದ ಕಾಮನ್ ರ‍್ಯಾಂಕ್ ಪಟ್ಟಿಯಲ್ಲಿ 3420 ಹಾಗೂ category (OBC) ವಿಭಾಗದಲ್ಲಿ 639ನೇ ರ‍್ಯಾಂಕ್ ಹಾಗೂ ಪ್ರೀತಿ ಸಿ ಎಲ್ 9271(cat)ನೇ ರ‍್ಯಾಂಕ್ ಗಳಿಸಿ ವಿಶೇಷ ಸಾಧನೆ ಗೈದಿದ್ದಾರೆ.
ಈ ಮೂಲಕ ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶಕ್ಕೆ ನಡೆಯುವ ಆಯ್ಕೆ ಪ್ರಕ್ರಿಯೆಗೆ ಅರ್ಹರಾಗಿದ್ದಾರೆ. ಸತತ ಆರು ವರ್ಷಗಳಿಂದಲೂ ನಮ್ಮ ಸಂಸ್ಥೆಯ ನುರಿತ ಅನುಭವಿ ಉಪನ್ಯಾಸಕರಿಂದಲೇ ಎಲ್ಲಾ ಸ್ಪರ್ಧಾತ್ಮಕ
ಪರೀಕ್ಷೆಗಳಿಗೂ ಉನ್ನತ ತರಬೇತಿಯನ್ನು ನೀಡುತ್ತಿರುವ ಹಾಸನದ ಏಕೈಕ ಪ್ರತಿಷ್ಠಿತ ಸಂಸ್ಥೆಯಾಗಿದೆ. ಹಿಂದಿನ ನಾಲ್ಕು ವರ್ಷಗಳಿಂದಲೂ ಜೆ.ಇ.ಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳೊಂದಿಗೆ ತೇರ್ಗಡೆ ಹೊಂದಿ ಹಾಸನ ಜಿಲ್ಲೆಗೆ ಹಾಗೂ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್. ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು ಹಾಗೂ ಸಂಯೋಜಕರಾದ ಆದಿತ್ಯ ವಟಿ ಕೆ ಮತ್ತು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.