Follow us:-
CLAT ಪರೀಕ್ಷೆಯಲ್ಲಿ ಹೆಚ್ ಕೆ ಎಸ್ ವಿದ್ಯಾರ್ಥಿಗಳ ಸಾಧನೆ
  • By CREATIVE ADMIN
  • December 20, 2025
  • No Comments

CLAT ಪರೀಕ್ಷೆಯಲ್ಲಿ ಹೆಚ್ ಕೆ ಎಸ್ ವಿದ್ಯಾರ್ಥಿಗಳ ಸಾಧನೆ

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾನೂನು ವಿಶ್ವವಿದ್ಯಾಲಯಗಳು ಮತ್ತು ಇತರ ಖಾಸಗಿ ಕಾನೂನು ಕಾಲೇಜುಗಳ ಐದು ವರ್ಷದ ಕಾನೂನು ಪದವಿ ಕೋರ್ಸುಗಳ ಪ್ರವೇಶಾತಿಗಾಗಿ ನಡೆಯುವ ಭಾರತದ ರಾಷ್ಟ್ರೀಯ ಮಟ್ಟದ CLAT ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಅದ್ಭುತ ಸಾಧನೆಗೈದಿದ್ದಾರೆ.

ವಿದ್ಯಾರ್ಥಿಗಳಾದ ಮೌರ್ಯಗಿರಿ ಎಸ್, ಯುವನ್ ರಾಘವೇಂದ್ರ, ಸ್ನಿಗ್ಧ ಹರೀಶ್, ವಿಲಾಸ್ ಬಿ ಎನ್, ಸಿಂಧು ಎ, ಸ್ವಾತಿ ಎಚ್ ಆರ್, ಆಯಿಶಾ ಅಕ್ರಮ್, ತನುಷಾ ಗೌಡ ಎಂ ಎಸ್, ಚಂದನ್ ಎನ್ ಗೌಡ ಅವರು ತಮ್ಮ ಮೊದಲ ಪ್ರಯತ್ನದಲ್ಲಿ ತೇರ್ಗಡೆ ಹೊಂದಿ ಮುಂದಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಆಯ್ಕೆಯಾಗಿದ್ದಾರೆ.

ಸಾಧಕರನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್ ಕೆ ಸುರೇಶ್, ಕಾರ್ಯದರ್ಶಿಗಳಾದ ಶ್ರೀ ಹೆಚ್ ಎಸ್ ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾ ಸಂಯೋಜಕರಾದ ರಕ್ಷಿತ್ ಬಿ.ಎಸ್ ಹಾಗೂ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿಗಳು ಶ್ಲಾಘಿಸಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *