ಹೆಚ್ ಕೆ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ದಿನಾಂಕ: 23-01-2026 ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಚರಿಸುತ್ತಿರುವ ಹೆಚ್ ಕೆ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2026ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ಮತದಾರರ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ಉಪ ಪ್ರಾಂಶುಪಾಲರಾದ ಶ್ರೀ ಆದಿತ್ಯ ವಟಿ ಕೆ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀನಿವಾಸ ಜೆ ಎನ್ ಅವರು ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.