ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ
ದಿನಾಂಕ: 14/08/2025 ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದೊಂದಿಗೆ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೆಚ್.ಕೆ.ಎಸ್ ಪಿ ಯು ಕಾಲೇಜು, ಹಾಸನ ಇಲ್ಲಿ ವಿಶ್ವ ಸಂಸ್ಕೃತ ದಿನದ ಪ್ರಯುಕ್ತ ‘ರಾಜಸೂಯ- 2025’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಂಗಳೂರಿನ ಬಿ ಇ ಎಲ್ ಪ್ರೌಢಶಾಲೆಯ ನಿವೃತ್ತ ಪ್ರಾಧ್ಯಾಪಕರಾದ ವಿದ್ವಾನ್ ವೆಂಕಟರಮಣ ಭಟ್ ಅವರು ಮಾತನಾಡುತ್ತಾ ಸಂಸ್ಕೃತ ಸಂಸ್ಕೃತಿಯನ್ನು ಹೊಂದಿರುವ ದೈವಿಕ ಭಾಷೆ. ಸಂಸ್ಕೃತ ದಿನದ ಮಹತ್ವವನ್ನು ವಿವರಿಸುತ್ತಾ ಪ್ರಾಚೀನ ಭಾರತದ ಸಾಹಿತ್ಯ ಮತ್ತು ವಿಜ್ಞಾನಗಳ ಕುರಿತು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು. ಸಂಸ್ಕೃತ ಉಪನ್ಯಾಸಕರಾದ ಗಣೇಶ್ ಕೆ ಭಟ್ ಅವರು ಸಂಸ್ಕೃತ ಭಾಷೆಯ ಮಹತ್ವವನ್ನು ತಿಳಿಸುತ್ತಾ ಕಾರ್ಯಕ್ರಮವನ್ನು ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಶ್ರೀ ಪ್ರವೀಣ್ ಎ ಅವರು ವಿದ್ಯಾರ್ಥಿಗಳು ಬಹುಭಾಷೆಗಳನ್ನು ಕಲಿಯುವ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕೆಂದು ಭಾಷೆಯ ಪ್ರಾಮುಖ್ಯತೆ ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಶ್ರೀ ವಿಮಲ್ ರಾಜ್ ಜಿ ಮಾತನಾಡಿ ಎಲ್ಲ ಭಾಷೆಗಳಿಗೂ ಅದರದ್ದೇ ಆದ ಹಿನ್ನೆಲೆ ಹಾಗೂ ಇತಿಹಾಸವಿದೆ ಎಲ್ಲಾ ಭಾಷೆಗಳನ್ನು ಗೌರವಿಸಬೇಕೆಂದು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಳೆದ ಬಾರಿಯ ಪ್ರಥಮ ಪಿ.ಯು.ಸಿ ವಾರ್ಷಿಕ ಸಂಸ್ಕೃತ ಪರೀಕ್ಷೆಯಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಮತ್ತು ವಿಶ್ವ ಸಂಸ್ಕೃತ ದಿನದ ಅಂಗವಾಗಿ ನಡೆದ ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಪ್ರಾಂಶುಪಾಲರಾದ ಆದಿತ್ಯ ವಟಿ. ಕೆ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಪ್ರಜ್ಞಲೋಚನ ಹಾಗೂ ಮಾನ್ಯತಾ ನಿರೂಪಿಸಿದರು. ಯೋಗಿತಾ ಪಟೇಲ್ ಸ್ವಾಗತಿಸಿದರೆ, ಚರಿತ ವಂದನಾರ್ಪಣೆಗೈದರು. ಸಮಾರಂಭದಲ್ಲಿ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.