ರಾಜ್ಯ ಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಹೆಚ್.ಕೆ.ಎಸ್ ನ ವಿದ್ಯಾರ್ಥಿಯ ಸಾಧನೆ.
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ, ಕಾರ್ಕಳ ಇದರ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಾಚರಿಸುತ್ತಿರುವ ಹಾಸನದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಹೆಚ್. ಕೆ. ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಸ್ವರೂಪ ಸಿ ಎನ್ ಅವರು ದಿನಾಂಕ 08-01-2025ನೇ ಬುಧವಾರದಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ 2024- 25ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ಅದ್ಭುತ ಸಾಧನೆಗೈದಿದ್ದಾರೆ.
ವಿಜೇತರನ್ನು ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಹೆಚ್.ಕೆ.ಸುರೇಶ್, ಕಾರ್ಯದರ್ಶಿಗಳಾದ ಶ್ರೀಯುತ ಹೆಚ್. ಎಸ್.ಪ್ರಶಾಂತ್ ಗೌಡ, ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ಪ್ರವೀಣ ಎಂ ಜಿ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.