Follow us:-
ಕ್ರಿಯೇಟಿವ್ ಕಾಲೇಜ್ ಉಡುಪಿ :ಸಂವಿಧಾನ ಶಿಲ್ಪಿ ಡಾ. ಬಿ . ಆರ್ ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ
  • By AdminCEF
  • January 29, 2024
  • No Comments

ಕ್ರಿಯೇಟಿವ್ ಕಾಲೇಜ್ ಉಡುಪಿ :ಸಂವಿಧಾನ ಶಿಲ್ಪಿ ಡಾ. ಬಿ . ಆರ್ ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

ಉಡುಪಿ(ಎ,14): ಮಹಾನ್ ಮಾನವತವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ  ಜನ್ಮದಿನಾಚರಣೆಯನ್ನು ಆಚರಿಸಲಾಯಿತು.ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ , ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ರವರದ್ದು. ಅವರ ಕಠಿಣ ಪರಿಶ್ರಮ, ನಡೆದು ಬಂದ ದಾರಿ, ಅವರ ಜ್ಞಾನ, ಇಡೀ ವಿಶ್ವಕ್ಕೆ ಮಾದರಿ ಎಂದು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ರವರು ತಮ್ಮ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.