+91 90198 44492, +91 96861 12198, +91 80737 56895

ತ್ರಿಶ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿ (ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಸಹಭಾಗಿತ್ವ) ಯಲ್ಲಿ ಶಿಕ್ಷಕರ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಆಚರಣೆ.

ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಕ್ರಿಯೇಟಿವ್ ಗುರು ದೇವೋಭವ ಕಾರ್ಯಕ್ರಮವು ದಿನಾಂಕ:07-09-2023ರಂದು ಆಚರಿಸಲಾಯಿತು.
ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಯವರು ಪ್ರಾಸ್ತಾವಿಕವಾಗಿ ಮಾತುಗಳನ್ನಾಡುತ್ತಾ, ” ಶಿಕ್ಷಕ ವೃತ್ತಿ ಪವಿತ್ರವಾದದ್ದು ನವ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಸಮಾಜಕ್ಕೆ ನೀಡುವಲ್ಲಿ ಶಿಕ್ಷಕರು ತಮ್ಮ ಸರ್ವಸ್ವವನ್ನು ತ್ಯಾಗ ಮಾಡುತ್ತಾರೆ ” ಎಂದು ನುಡಿದರು.
ಸನ್ಮಾನ ಕಾರ್ಯಕ್ರಮ
ಕ್ರಿಯೇಟಿವ್ ಗುರು ದೇವೋಭವ ಕಾರ್ಯಕ್ರಮದಲ್ಲಿ ಉಡುಪಿಯ ಕಲ್ಯಾಣಪುರದ ಡಾ. ಟಿ. ಎಂ. ಎ. ಫೈ. ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ಶೇಖರ್ ಪಿ., ಬ್ರಹ್ಮಾವರ ಜಿ.ಎಮ್ . ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀ ಜಾರ್ಜ್ ಕುರಿಯನ್, ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ಶಿಕ್ಷಣ ಪ್ರತಿಷ್ಠಾನದ ಪ್ರಾಂಶುಪಾಲ ಶರಣ್ ಕುಮಾರ್ ಹಾಗೂ ತ್ರಿಶ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ಶ್ರೀ ಸುಧಾಕರ್ ಐಡಿ ಅವರನ್ನು ಸನ್ಮಾನಿಸಲಾಯಿತು. ಬಳಿಕ ಕಾಲೇಜಿನ ಉಪನ್ಯಾಸಕ ವೃಂದದವರಿಗೆ ಗೌರವವನ್ನು ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರುಗಳಲ್ಲಿ ಓರ್ವರಾದ ಅಮೃತ ರೈ ಮಾತನಾಡಿ “ವಿದ್ಯಾರ್ಥಿಗಳು ಜೀವನ ಪರ್ಯಂತ ತನ್ನ ಜೀವನೋಪಾಯಕ್ಕೆ ಮಾರ್ಗದರ್ಶನವನ್ನು ನೀಡಿರುವ ಸಮಾಜದಲ್ಲಿ ತನ್ನನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿದ ಗುರುವನ್ನು ಎಂದಿಗೂ ಮರೆಯಬಾರದು. ಬಾಗುವುದು ನಮ್ಮತನವಾಗಬೇಕೆ ಹೊರತು ಬೀಗುವುದರಿಂದ ನಮಗೇನು ಸಿಗಲಾರದು”ಎಂದು ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ಸ್ವಾಗತಿಸಿ, ವಿದ್ಯಾರ್ಥಿಗಳಾದ ದೀಕ್ಷಿತ ನಿರೂಪಿಸಿ, ಮುಕ್ತ, ಹಿತೈಷಿಣಿ,ಶಶಾಂಕ್, ಸತೀಶ್ ಸನ್ಮಾನ ಪತ್ರವನ್ನು ವಾಚಿಸಿ, ಯುವರಾಜ್ ಬಿಕೆ ವಂದಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೊರಂಗ್ರಪಾಡಿಯ ಹುಲಿವೇಷ ತಂಡದವರಿಂದ ಹುಲಿ ಕುಣಿತ ನಡೆಯಿತು. ಹುಲಿ ಕುಣಿತದ ಹಿನ್ನೆಲೆ ಮಹತ್ವವನ್ನು ಕನ್ನಡ ಉಪನ್ಯಾಸಕರಾದ ಶ್ರೀ ಸಂತೋಷ್ ರವರು ತಿಳಿಸಿಕೊಟ್ಟರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ ಕಾರ್ಯಕ್ರಮ ನಡೆಯಿತು.

Leave a Reply

This site uses Akismet to reduce spam. Learn how your comment data is processed.

GDPR